Estd.:5-4-1925
Regd.:7-3-1948
DEVADIGA SANGHA MUMBAI
(Regd. on 7-3-1948 under Bombay Public Trust Act, 1950 - Regd. No.3369-F-68 (BOM) and
Regd. on 13-3-1948 under the Societies Registration Act XXI, 1860 - Regd. No.1615)
New Member Registration
ದೇವಾಡಿಗ ಸಂಘ ಮುಂಬೈ ಪ್ರಾದೇಶಿಕ ಸಮನ್ವಯ ಸಮಿತಿ ಡೊಂಬಿವಲಿ ವಲಯದ ಮಹಿಳಾ ವಿಭಾಗದಿಂದ ಅರಿಶಿನ ಕುಂಕುಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ.

ದೇವಾಡಿಗ ಸಂಘ ಮುಂಬೈ ಪ್ರಾದೇಶಿಕ ಸಮನ್ವಯ ಸಮಿತಿ ಡೊಂಬಿವಲಿ ವಲಯದ ಮಹಿಳಾ ವಿಭಾಗದಿಂದ ಅರಿಶಿನ ಕುಂಕುಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ.

ದೇವಾಡಿಗ ಸಂಘ ಮುಂಬೈ ಪ್ರಾದೇಶಿಕ ಸಮನ್ವಯ ಸಮಿತಿ ಡೊಂಬಿವಲಿ ವಲಯದ ಮಹಿಳಾ ವಿಭಾಗದಿಂದ ಫೆಬ್ರವರಿ 17ರಂದು ಡೊಂಬಿವಲಿ ಪಶ್ಚಿಮದ ಜಾನಕಿ ಸಭಾಗ್ರಹದಲ್ಲಿ ಸಂಜೆ 6 ಗಂಟೆಯಿಂದ ಅರಿಶಿನ ಕುಂಕುಮ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಬಹಳ ವಿಜ್ರಂಭಣಿಯಿಂದ ಜರಗಿತು. ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಮತಿ ಅನುಪಮಾ ಪ್ರಕಾಶ್ ಶೆಟ್ಟಿ ಹಾಗೂ ಮಾತೃ ಸಂಘದ ಉಪಾಧ್ಯಕ್ಷರಾದ ಶ್ರೀಮತಿ ಮಾಲತಿ ಜೆ. ಮೊಯಿಲಿ, ಮಾತೃ ಸಂಘದ ಮಹಿಳಾ ವಿಭಾಗದ ಉಪ ಕಾರ್ಯಧ್ಯಕ್ಷರಾದ ಶ್ರೀಮತಿ ಪ್ರಮೀಳ ವಿಜಯ ಸೇರಿಗಾರ ಹಾಗೂ ಶ್ರೀಮತಿ ಪ್ರತಿಭಾ ಗಣೇಶ್ ದೇವಾಡಿಗ, ವಲಯದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷರಾದ ಶ್ರೀಮತಿ ಶಾಲಿನಿ ಜಯಂತ್ ದೇವಾಡಿಗ, ಉಪ ಕಾರ್ಯಧ್ಯಕ್ಷರಾದ ಶ್ರೀಮತಿ ನಿರ್ಮಲ ರಾಮಚಂದ್ರ ದೇವಾಡಿಗ ಹಾಗೂ ಕಾರ್ಯದರ್ಶಿ ಶ್ರೀಮತಿ ಜಯತಾಕ್ಷಿ ವಿಜಯ ದೇವಾಡಿಗ ಉಪಸ್ಥಿತರಿದ್ದರು. ಉಪಾಧ್ಯಕ್ಷರಾದ ಶ್ರೀಮತಿ ವಿಶಾಲ ಹೇಮಾನಂದ ದೇವಾಡಿಗ ಹಾಗೂ ಜೊತೆ ಕಾರ್ಯದರ್ಶಿ ಶ್ರೀಮತಿ ಪದ್ಮಲತಾ ರಾಜು ಮೊಯಿಲಿ ಅವರ ಪ್ರಾರ್ಥನೆಯೊಂದಿಗೆ ಗಣ್ಯರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಭಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಮತಿ ಅನುಪಮಾ ಪ್ರಕಾಶ್ ಶೆಟ್ಟಿಯವರಿಗೆ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶ್ರೀಮತಿ ಶಾಲಿನಿ ಜಯಂತ್ ದೇವಾಡಿಗರು ವಲಯದ ಸಮಿತಿಯ ಪರವಾಗಿ ಶಾಲು ಹೊದಿಸಿ ಪುಷ್ಪಗುಚ್ಛ ಕೊಟ್ಟು ಸತ್ಕರಿಸಿದರು. ಡೊಂಬಿವಲಿ ವಲಯದ ಸದಸ್ಯೆ ಶ್ರೀಮತಿ ಮಲ್ಲಿಕಾ ಶೇಕರ ದೇವಾಡಿಗ ಅವರು ಅರಿಶಿನ ಕುಂಕುಮದ ಮಹತ್ವ ಹಾಗೂ ಅದರ ವಿಶೇಷತೆಯನ್ನು ಸಂಕ್ಷಿಪ್ತವಾಗಿ ಸಭೆಗೆ ತಿಳಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಮತಿ ಅನುಪಮಾ ಪ್ರಕಾಶ್ ಶೆಟ್ಟಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ ಮಹಿಳಾ ವಿಭಾಗ ಹಾಗೂ ಯುವ ವಿಭಾಗದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಂಡಾಡಿದರು ಹಾಗೂ ದೇವಾಡಿಗ ಸಂಘದ ಮುಂಬರುವ ಶತಮಾನೋತ್ಸವ ಕಾರ್ಯಕ್ರಮಕ್ಕೆ ಶುಭ ಕೋರಿದರು.

ಮಾತೃ ಸಂಘದ ಅಧ್ಯಕ್ಷರಾದ ಶ್ರೀ ಪ್ರವೀಣ್ ನಾರಾಯಣ ದೇವಾಡಿಗರು ಅತಿಥಿ ಸತ್ಕಾರವನ್ನು ಸ್ವೀಕರಿಸಿ ಸಭೆಯಲ್ಲಿ ನೆರೆದ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದರು ಹಾಗೂ ಮಹಿಳೆಯರನ್ನು ಪ್ರೋತ್ಸಾಹಿಸುತ್ತಾ ಸಂಘದ 100ನೇ ವರ್ಷದ ಕಾರ್ಯಕ್ರಮದ ರೂಪುರೇಷೆಗಳನ್ನು ತಿಳಿಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ದೇವಾಡಿಗ ಸಂಘ ಮುಂಬೈಯ ಉಪಾಧ್ಯಕ್ಷರಾದ ಶ್ರೀಮತಿ ಮಾಲತಿ ಜೆ ಮೊಯಿಲಿ, ಮಹಿಳಾ ವಿಭಾಗದ ಉಪಾಧ್ಯಕ್ಷರಾದ ಪ್ರಮೀಳಾ ವಿಜಯ್ ಸೇರಿಗಾರ ಹಾಗೂ ಶ್ರೀಮತಿ ಪ್ರತಿಭಾ ಗಣೇಶ್ ದೇವಾಡಿಗರು ಸಂದರ್ಭಕ್ಕೆ ಅನುಗುಣವಾಗಿ ತಮ್ಮ ತಮ್ಮ ಅನಿಸಿಕೆಗಳನ್ನು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಸಭೆಯಲ್ಲಿ ಮಾತೃ ಸಂಘದ ಅದ್ಯಕ್ಷರಾದ ಶ್ರೀ ಪ್ರವೀಣ್ ನಾರಾಯಣ ದೇವಾಡಿಗ, ಉಪಾಧ್ಯಕ್ಷರಾದ ಶ್ರೀ ನರೇಶ್ ದೇವಾಡಿಗ, ಗೌರವ ಪ್ರಧಾನ ಕಾರ್ಯದರ್ಶಿ ಶ್ರೀ ವಿಶ್ವನಾಥ್ ದೇವಾಡಿಗ, ಗೌರವ ಜೊತೆ ಕಾರ್ಯದರ್ಶಿ ಶ್ರೀ ನಿತೀಶ್ ದೇವಾಡಿಗ, ಗೌರವ ಜೊತೆ ಖಜಾಂಚಿ ಶ್ರೀ ಸುರೇಶ್ ದೇವಾಡಿಗ, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷರಾದ ಶ್ರೀಮತಿ ಜಯಂತಿ ಆರ್. ಮೊಯಿಲಿ, ಶ್ರೀ ಸುಧಾಕರ್ ಎಲ್ಲೂರು, ಜಯ ದೇವಾಡಿಗ, ಶ್ರೀ ಮೋಹನದಾಸ್ ಗುಜರನ್, ಮಹಿಳಾ ವಿಭಾಗದ ಕಾರ್ಯದರ್ಶಿ ಶ್ರೀಮತಿ ಸುಜಯ ದೇವಾಡಿಗ, ಶ್ರೀಮತಿ ಪೂರ್ಣಿಮಾ ದೇವಾಡಿಗ ವಲಯದ ಕಾರ್ಯಾಧ್ಯಕ್ಷರಾದ ಶ್ರೀ ಅಶೋಕ್ ದೇವಾಡಿಗ, ಉಪ ಕಾರ್ಯಾಧ್ಯಕ್ಷರಾದ ಶ್ರೀ ಸುರೇಶ್ ದೇವಾಡಿಗ ಮತ್ತು ಶ್ರೀ ಜಯಂತ್ ದೇವಾಡಿಗ ಹಾಗೂ ಮಾಜಿ ಕಾರ್ಯಾಧ್ಯಕ್ಷರಾದ ಶ್ರೀ ಹೇಮಾನಂದ ದೇವಾಡಿಗ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷರಾದ ಶ್ರೀಮತಿ ಮೀನಾ ಶಂಕರ್ ಹಾಗೂ ಶ್ರೀಮತಿ ನಳಿನಿ ಸುರೇಶ್ ದೇವಾಡಿಗರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರುವ ವಲಯದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷರಾದ ಶ್ರೀಮತಿ ಶಾಲಿನಿ ಜಯಂತ್ ದೇವಾಡಿಗ ಅವರು ತನ್ನ ಅಧ್ಯಕ್ಷತೆಯ ಭಾಷಣದಲ್ಲಿ ಮಾತೃ ಸಂಘ ಹಾಗೂ ಇತರ ವಲಯಗಳಿಂದ ಆಗಮಿಸಿದ ಪದಾಧಿಕಾರಿಗಳಿಗೆ ಹಾಗೂ ವಲಯದ ಮಹಿಳಾ ಸದಸ್ಯರು ಮತ್ತು ಮಕ್ಕಳು ವೈವಿಧ್ಯಮಯ ಮನೋರಂಜನ ಪ್ರದರ್ಶನವನ್ನು ನೀಡಿ ಕಾರ್ಯಕ್ರಮವನ್ನು ಯಶಸ್ವಿಯಾಗುವಂತೆ ಮಾಡಿಕೊಟ್ಟದ್ದಕ್ಕೆ ಕೃತಜ್ಞತೆ ಸಲ್ಲಿಸಿದರು.

ಸಭಾ ಕಾರ್ಯಕ್ರಮವನ್ನು ಶ್ರೀ ಕೃಷ್ಣ ದೇವಾಡಿಗರು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಶ್ರೀಮತಿ ವಿಶಾಲಾ ಹೇಮಾನಂದ ದೇವಾಡಿಗರು ನಿರೂಪಿಸಿದರು. ಕೊನೆಯಲ್ಲಿ ಶ್ರೀಮತಿ ಪುಷ್ಪಲತಾ ಎಲ್. ದೇವಾಡಿಗರು ವಂದನಾರ್ಪಣೆ ಗೈದರು.

ಪ್ರೀತಿ ಭೋಜನದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.